ಬೆಂಗಳೂರು : ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.
ಸದಾ ಹರಿವ ಸಹನೆಯ ನದಿ, ಬರಿದಾಗದ ಕರುಣೆಯ ಕಡಲು, ಮಮತೆಯ ಮಹಾಸಾಗರದ ಪ್ರತೀಕವೇ ಆಗಿರುವ ಸಮಸ್ತ ಮಹಿಳೆಯರಿಗೆ ವಿಶ್ವ ಮಹಿಳಾ ದಿನದ ಶುಭಾಶಯಗಳು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಮಹಿಳಾ ದಿನದ ಶುಭಾಶಯ ಕೋರಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮಹಿಳಾ ಮೀಸಲಾತಿ ಮಸೂದೆ ಜಾರಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.
Source : UNI
Follow us on Social media