Breaking News

ಮಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ದ.ಕ. ಜಿಲ್ಲೆಯ ಕೋವಿಡ್ ಆಸ್ಪತ್ರೆ ವೆನ್ಲಾಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂಧಿಸದೆ ಇದೀಗ ಮೃತಪಟ್ತಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಸದ್ಯ ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಸೋಂಕು ನಿಯಂತ್ರಣಕ್ಕೆ ವಿವಿಧ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲಾಡಳಿತ ಆರೋಗ್ಯ ಇಲಾಖೆ ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುತ್ತಿರುವ ನಡುವೆಯೇ ಸೋಂಕಿನಿಂದ ಮೃತರಾಗುತ್ತಿರುವ ವರದಿಗಳು ಕೂಡ ಲಭ್ಯವಾಗುತ್ತಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Follow us on Social media

About the author