ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಶುಕ್ರವಾರದಂದು ಆರು ಮಂದಿ ಮೃತಪಟ್ಟಿದ್ದಾರೆ. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.
ಇಂದು ಮೃತಪಟ್ಟವರ ಪೈಕಿ ನಾಲ್ವರು ಕೋವಿಡ್ ಆಸ್ಪತ್ರೆ ವೆನ್ಲಾಕ್ ನಲ್ಲಿ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಮಂಗಳೂರಿನ ತೊಕ್ಕೊಟ್ಟುವಿನ 58 ವರ್ಷದ ಮಹಿಳೆ, ಮಂಗಳೂರಿನ ಫಳ್ನೀರ್ ನ 65 ವರ್ಷದ ವ್ಯಕ್ತಿ, ಉಳ್ಳಾಲ ಮೂಲದ 67 ವರ್ಷದ ವ್ಯಕ್ತಿ, ಹೊಸಬೆಟ್ಟುವಿನ 35 ವರ್ಷದ ಯುವಕ ಮೃತಪಟ್ಟಿದ್ದಾರೆ. ಉಳಿದಂತೆ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
Follow us on Social media



 
  
  
  
  
  
 