ಮಂಗಳೂರು : ದಕ್ಷಿಣ ಕನ್ನಡ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಅವರ ಕಾರು ಅಪಘಾತಕ್ಕೀಡಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಸುದರ್ಶನ್ ಅವರು ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಜು.1 ಬುಧವಾರ ಮದ್ಯಾಹ್ನ ಈ ಘಟನೆ ನಡೆದಿದ್ದು, ಮಿಜಾರ್ ಸಮೀಪ ಅವರ ಕಾರು ಬರುತ್ತಿದ್ದಂತೆ ಪಾದಚಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದ ವೇಳೆ ರಸ್ತೆ ಪಕ್ಕ ಕೆಸರಿಗೆ ಜಾರಿದ ಇನ್ನೋವಾ ಕಾರ್ ಮುಂಭಾಗದಲ್ಲಿ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಮೂಡಬಿದ್ರೆ ಠಾಣಾ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.
Follow us on Social media