Breaking News

ರಾಜ್ಯದಲ್ಲಿ ಇಂದು ಕೊರೋನಾದಿಂದ 6 ಸಾವು, ಹೊಸದಾಗಿ 438 ಜನರಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 438 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 9,46,076ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಆರು ಮೃತಪಟ್ಟಿದ್ದು, ಮೈಸೂರು ಹಾಗೂ ಬೆಂಗಳೂರು ನಗರದಲ್ಲಿ ಸಾವಿನ ಪ್ರಕರಣಗಳು ವರದಿಯಾಗಿದೆ.  ಈ ಮೂಲಕ ಸಾವಿನ ಸಂಖ್ಯೆ 12,273ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 306 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,02,518ಕ್ಕೆ ಏರಿಕೆಯಾಗಿದೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 344 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,27,924ಕ್ಕೆ ಏರಿಕೆಯಾಗಿದೆ. ಇನ್ನು 5,860 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 125 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow us on Social media

About the author