Breaking News

ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ,: ಅಗತ್ಯ ಸೇವೆ ಹೊರತು ಮತ್ತೆಲ್ಲವೂ ಬಂದ್

ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ತಿಳಿಸಿದೆ.

ಮೊಬೈಲ್ ಶಾಪ್, ಟಿವಿ, ಎಲೆಕ್ಟ್ರಾನಿಕ್ ಶೋ ರೂಮ್, ಬ್ಯಾಂಗಲ್ಸ್ ಸ್ಟೋರ್, ಚಿನ್ನದ ಅಂಗಡಿ ಬುಕ್ ಶಾಪ್, ಚಪ್ಪಲಿ ಅಂಗಡಿಗಳು, ಫ್ಯಾನ್ಸಿ ಸ್ಟೋರ್, ಬಟ್ಟೆ ಅಂಗಡಿಗಳು ಸೇರಿ ಎಲ್ಲವನ್ನೂ ಬಂದ್ ಮಾಡಬೇಕಿದೆ.

ಹೋಟೆಲ್ , ರೆಸ್ಟೋರೆಂಟ್, ಬಾರ್ ಗಳಲ್ಲಿ ಪಾರ್ಸಲ್ ತರಲಷ್ತೇ ಅವಕಾಶವಿದೆ.  ಆಟೋ, ಬಸ್, ಮೆಟ್ರೋ ಸೇವೆಗಳು ಲಭ್ಯವಾಗಲಿದೆ.

ಬ್ಯಾಂಕ್, ಎಟಿಎಂ, ಇನ್ಶ್ಯೂರೆನ್ಸ್ ಕಂಪನಿ, ಪೇಪರ್, ಟಿವಿ ಸೇರಿದಂತೆ ವಿವಿಧ ಮೀಡಿಯಾ ಸಂಸ್ಥೆಗಳು, ಇ-ಕಾಮರ್ಸ್ ಸೇವೆ, ಕಾಸಗಿ ಸೆಕ್ಯೂರಿಟಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ಗಳಿಗೆ ಅನುಮತಿಸಲಾಗಿದೆ.

ಈ ನೂತನ ಆದೇಶ ನಿನ್ನೆಯಿಂದ ಮೇ 4ರವರೆಗೆ ಜಾರಿಯಲ್ಲಿರಲಿದೆ.

Follow us on Social media

About the author