Breaking News

ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣ: ಮಂಗಳೂರು ವಿವಿ ಕಾಲೇಜಿಗೆ ದಿಢೀರ್‌ ಮುತ್ತಿಗೆ

ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣದಲ್ಲಿ ಹಲ್ಲೆ ನಡೆಸಿದ ವಿದ್ಯಾರ್ಥಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಕಾಲೇಜಿಗೆ ದಿಢೀರ್‌ ಮುತ್ತಿಗೆ ಹಾಕಿದರು.

ಕೆಲ ದಿನಗಳಿಂದ ಹಿಜಾಬ್‌ ಪ್ರಕರಣದಲ್ಲಿ ಸುದ್ದಿಯಾಗಿದ್ದ ನಂತರ ತರಗತಿಯಲ್ಲಿ ಸಾವರ್ಕರ್‌ ಫೋಟೋ ಅಳವಡಿಸಿ ವಿವಾದಕ್ಕೀಡಾಗಿದ್ದ ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ

ಸಾವರ್ಕರ್‌ ಫೋಟೋ ಗಲಾಟೆಯ ಮುಂದುವರಿದ ಭಾಗವಾಗಿ ಹೊಡೆದಾಟ ನಡೆದಿದೆ. ಇದರಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಈ ಹಿನ್ನೆಲೆಯಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಸದಸ್ಯರು ಇಂದು ಸಂಜೆ ವಿವಿ ಕಾಲೇಜಿನ ಗೇಟ್‌ ಬಳಿ ದಿಢೀರ್‌ ಪ್ರತಿಭಟನೆ ನಡೆಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.

ಈ ವೇಳೆ ಸ್ಥಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

Follow us on Social media

About the author