Breaking News

ಅಯ್ಯನಕೆರೆ ಪ್ರವಾಸಿ ತಾಣವಾಗಿಸಲು ಕ್ರಮ ವಹಿಸಿ: ಸಚಿವ ಸಿ.ಟಿ. ರವಿ

ಚಿಕ್ಕಮಗಳೂರು: ಅಯ್ಯನಕೆರೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಿ ವಿವಿಧ ಕ್ರೀಡಾ ಚಟುವಟಿಗಳನ್ನು ಆಯೋಜಿಸುವ ಮೂಲಕ ಪ್ರವಾಸಿ ತಾಣವಾಗಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಅವರು ಸೂಚಿಸಿದರು.

ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾಗಿರುವ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅಯ್ಯನಕೆರೆಯಲ್ಲಿ ದೋಣಿ ವಿಹಾರ, ಸೈಕ್ಲಿಂಗ್, ಟ್ರಕ್ಕಿಂಗ್, ಮನರಂಜನಾ, ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ದೇಶ-ವಿದೇಶಗಳಿಂದ ಹೆಚ್ಚಿನ ಪ್ರವಾಸಿಗರನ್ನು ಸೆಳೆಯಲು ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿ ಎಂದು ತಿಳಿಸಿದರು. 

ಅಯ್ಯನಕೆರೆಯ ಐಲ್ಯಾಂಡ್ ಪ್ರದೇಶದಲ್ಲಿ ವಿವಿಧ ರೀತಿ ಹೂವು-ಹಣ್ಣುಗಳ ಗಿಡಗಳನ್ನು ಬೆಳೆಸಿ ಪಕ್ಷಿ ಹಾಗೂ ವನ್ಯ ಜೀವಿಗಳು ಹೆಚ್ಚಿನ ಪ್ರಮಾಣದಲ್ಲಿ ಬರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ ಅವರು ಪರಿಸರ ಸಂರಕ್ಷಣೆಗೆ ವಿಶೇಷ ಒತ್ತು ನೀಡಬೇಕು ಎಂದರು. 

ನಡುಗಡ್ಡೆ ಪ್ರದೇಶಗಳಲ್ಲಿ ಟೊಬೋಬಿಯಾ ಗಿಡಗಳನ್ನು ಬೆಳೆಸಿದ್ದಲ್ಲಿ ಹೆಚ್ಚಿನ ಪ್ರವಾಸಿಗರು ಫೋಟೋ ಶೂಟ್ ಹಾಗೂ ಚಲನಚಿತ್ರಗಳ ಚಿತ್ರಿಕರಣಕ್ಕೆ ಸಹಾಯವಾಗಲಿದೆ. ಅಯ್ಯನಕೆರೆಯ ಪ್ರದೇಶವನ್ನು ಹೆಚ್ಚಿನದಾಗಿ ಅಭಿವೃದ್ಧಿ ಪಡೆಸಿದ್ದಲ್ಲಿ ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲೇ ಉತ್ತಮವಾದ ಪ್ರವಾಸಿ ತಾಣವಾಗಿ ಹೊರಹೊಮ್ಮಲಿದೆ ಇದಕ್ಕಾಗಿ ಬೇಕಾಗಿರುವ ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದರು. 

ಈ ಹಿಂದೆ ಜಿಲ್ಲೆಯ ಪ್ರವಾಸೋದ್ಯಮ ಕಾಮಗಾರಿಗಳ ಅಭಿವೃದ್ಧಿಗೆ ಮಂಜೂರಾಗಿರುವ  ಅನುದಾನವನ್ನು ಯಾವ ರೀತಿಯಲ್ಲಿ ಬಳಕೆ ಮಾಡಲಾಗಿದೆ ಜೊತೆಗೆ ಯಾವ-ಯಾವ ಭಾಗದಲ್ಲಿ ಕಾಮಗಾರಿಗಳು ಸಂಪೂರ್ಣವಾಗಿವೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಉಳಿದಿರುವ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್. ಪೂವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  ಆಯುಕ್ತ ಕೆ.ಶ್ರೀನಿವಾಸ್, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಡಾ. ಹೆಚ್.ಎಲ್. ನಾಗರಾಜ್, ಅಪರ ಜಿಲ್ಲಾಧಿಕಾರಿ ಡಾ. ಕುಮಾರ್, ನಗರಾಭಿಕೋಶದ ಯೊಜನಾ ನಿರ್ದೇಶಕ ಚಂದ್ರಶೇಖರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ಉಪನಿರ್ದೇಶಕಿ ಹೆಚ್.ಪಿ. ಮಂಜುಳಾ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×