Breaking News

ಇಂದಿನಿಂದ ಕೆಎಸ್ ಆರ್ ಟಿಸಿ ರಾತ್ರಿ ಬಸ್ ಸೇವೆ ಆರಂಭ

ಬೆಂಗಳೂರು: ಪ್ರಯಾಣಿಕರ ಒತ್ತಡ ಮತ್ತು ನಷ್ಟ ಸರಿದೂಗಿಸುವ ಉದ್ದೇಶದಿಂದ ಇಂದಿನಿಂದ ಕೆ.ಎಸ್.ಆರ್.ಟಿ.ಸಿಯಿಂದ ರಾತ್ರಿ ಬಸ್ ಸೇವೆ ಆರಂಭಿಸಲಾಗಿದೆ.

ಬಸ್ ಗಳು ಎಂದಿನಂತೆ ಕಾರ್ಯಾಚರಣೆ ಮಾಡಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು  ಸಾರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ. 

ಕೊವಿಡ್-19 ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೋಂಕು ನಿಯಂತ್ರಣದ ಜತೆಗೆ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿದೆ. ವ್ಯಕ್ತಿಗತ  ಅಂತರ ಕಾಪಾಡಿ , ಸ್ಯಾನಿಟೈಸರ್ ಬಳಸಿ, ಮಾಸ್ಕ್ ಧರಿಸಿದವರಿಗೆ  ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

ಹೀಗಾಗಿ ಸಾರಿಗೆ ಬಸ್ಸುಗಳಲ್ಲಿನ ಪ್ರಯಾಣ  ಸುರಕ್ಷತೆಯಿಂದ ಕೂಡಿದ್ದು, ಸೋಂಕು ನಿಯಂತ್ರಣ ಕ್ರಮಗಳು ಮುಂದುವರೆಯುತ್ತಿವೆ. “ಪ್ರಯಾಣಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ” ಎಂದು ಹೇಳಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×