Breaking News

ಉಡುಪಿ: ‘ಈದ್‌ಮಿಲಾದ್ ಆಚರಣೆ – ಕೊರೊನಾ ಮಾರ್ಗಸೂಚಿ ಪಾಲಿಸಿ’- ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬವನ್ನು ಅಕ್ಟೋಬರ್ 29 ರಂದು ಆಚರಿಸಲಾಗುತ್ತಿದ್ದು, ಈ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಒಂದೆಡೆ ಸೇರುವುದು ಸಾಮಾನ್ಯವಾಗಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೊರೊನಾ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸುವ ಕುರಿತು ಈ ಕೆಳಕಂಡ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

ಜಿಲ್ಲೆಯಾದ್ಯಂತ ಅಕ್ಟೋಬರ್ 29 ರಂದು ಆಚರಿಸಲಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ (ಜುಲೂಸ್), ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ಸಾಂಸ್ಕೃತಿಕ ಕಾರ್ಯಕ್ರಮ ಸಭೆ, ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಮಸೀದಿಗಳಲ್ಲಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೊರೊನಾ ಶಿಷ್ಠಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ನೆರವೇರಿಸಬೇಕು.

ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು/ಡಿಜಿಟಲ್ ಸೌಂಡ್ ಸಿಸ್ಟಮ್ (ಡಿಜೆ) ಬಳಕೆಯನ್ನು ನಿಷೇಧಿಸಲಾಗಿದೆ.

ಮಾಸ್ಕ್‌‌ಗಳನ್ನು ಕಡ್ಡಾಯವಾಗಿ ಎಲ್ಲರೂ ಉಪಯೋಗಿಸಬೇಕು. 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಹಬ್ಬದ ಆಚರಣೆಯನ್ನು ಮಾಡಬೇಕು. ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈ ತೊಳೆಯಲು ಪ್ರವೇಶ ದ್ವಾರದಲ್ಲಿ ಸೂಕ್ತ ವ್ಯವಸ್ಥೆಯನ್ನು ಮಾಡಬೇಕು. ಕಡ್ಡಾಯವಾಗಿ ವೈಯಕ್ತಿಕವಾಗಿ ಎಲ್ಲರೂ 6 ಅಡಿ ಅಂತರದ ದೈಹಿಕ/ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಖಬರಸ್ಥಾನ್ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನೆ ಮುಂತಾದವುಗಳನ್ನು ಆಯೋಜಿಸುವಂತಿಲ್ಲ.

ಮೇಲ್ಕಂಡ ನಿರ್ದೇಶನವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದಲ್ಲಿ ಅಂತವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 5 (3), 6(1) (2)ರನ್ವಯ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 57 ರನ್ವಯ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×