Breaking News

ಒಂದೇ ದಿನ 9 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪತ್ತೆ, ಇಟಲಿ ಹಿಂದಿಕ್ಕಿ 6ನೇ ಸ್ಥಾನಕ್ಕೆ ಜಿಗಿದ ಭಾರತ!

ನವದೆಹಲಿ: ದಿನದಿಂದ ದಿನಕ್ಕೆ ಭಾರತದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಇಟಲಿಯನ್ನು ಹಿಂದಿಕ್ಕಿದ ಭಾರತ ಇದೀಗ 6ನೇ ಸ್ಥಾನಕ್ಕೆ ಜಿಗಿದಿದೆ. 

ಭಾರತದಲ್ಲಿ ಇಂದು ಒಂದೇ ದಿನ 9 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 2.36 ಲಕ್ಷ ದಾಟಿದೆ. ಇನ್ನು ದೇಶದಲ್ಲಿ ಇಂದು 278 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 6,641ಕ್ಕೆ ಏರಿಕೆಯಾಗಿದೆ. 

ಸೋಂಕಿತರ ಸಂಖ್ಯೆಯಲ್ಲಿ ಭಾರತ ಇಟಲಿಯನ್ನು ಹಿಂದಿಕ್ಕಿದೆ. ಇಟಲಿಯಲ್ಲಿ ಆರಂಭದಲ್ಲಿ ಮೃರಣಮೃದಂಗ ಮುಂದುವರೆದಿತ್ತು. ಇಲ್ಲಿಯವರೆಗೂ ಬರೋಬ್ಬರಿ 34 ಸಾವಿರ ಮಂದಿ ಸಾವಿಗೀಡಾಗಿದ್ದಾರೆ. ಇನ್ನು 2.34 ಲಕ್ಷ ಮಂದಿ ಸೋಂಕಿಗೆ ತುತ್ತಾಗಿದ್ದಾರೆ. 

Follow us on Social media

About the author