Breaking News

ಕಾಂಗ್ರೆಸ್‍ನ 15 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ನಳಿನ್‌‌ ಕುಮಾರ್‌ ಕಟೀಲ್

ರಾಮನಗರ : ನನ್ನ ಸಂಪರ್ಕದಲ್ಲಿ ಕಾಂಗ್ರೆಸ್‌ನ 15 ಶಾಸಕರು ಇದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌‌ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗಿನ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್‌ ಪಕ್ಷದ ಅನೇಕ ಶಾಸಕರು ನನ್ನ ಸಂಪರ್ಕದಲ್ಲಿಯೂ ಇದ್ದಾರೆ ಎಂದು ತಿಳಿಸಿದರು.

ಇನ್ನು ವಿಧಾನ ಪರಿಷತ್‌‌ ಸದಸ್ಯ ಸಿ.ಪಿ ಯೋಗೀಶ್ವರ್‌‌‌‌‌, ಮಾಜಿ ಮುಖ್ಯಮಂತ್ರಿ ಎಚ್‌‌ಡಿಕೆ ಅವರು ಬಿಜೆಪಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಈ ವಿಚಾರವಾಗಿ ನಾನೇನು ಹೆಚ್ಚು ಹೇಳುವುದಿಲ್ಲ ಎಂದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×