Breaking News

ಕೊರೋನಾ ವೈರಸ್ ಆರ್ಭಟಕ್ಕೆ ಭಾರತ ತತ್ತರ: 24 ಗಂಟೆಗಳಲ್ಲಿ 8,171 ಹೊಸ ಪಾಸಿಟಿವ್ ಪ್ರಕರಣಗಳು, 204 ಸಾವು

ನವದೆಹಲಿ: ಕೊರೋನಾ ವೈರಸ್ ಆರ್ಭಟಕ್ಕೆ ಭಾರತ ತತ್ತರಿಸಿದ್ದು, ದಿನೇ ದಿನೇ ಹೊಸ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 8,171 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 204 ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 8,171 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,98,706ಕ್ಕೆ ಏರಿಕೆಯಾಗಿದೆ. ಅಂತೆಯೇ 24 ಗಂಟೆಗಳಲ್ಲಿ 204 ಸೋಂಕಿತರು ಸಾವನ್ನಪ್ಪಿದ್ದು, ಆ  ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 5,598ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 97,581 ಸಕ್ರಿಯ ಪ್ರಕರಣಗಳಿದ್ದು, 95,526 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×