Breaking News

ಕೋವಿಡ್ ಸಂಕಷ್ಟ ಕಾಲದಲ್ಲಿ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ ಸುದೀಪ್!

ಬೆಂಗಳೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್,  ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು 
ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ.

ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು 
ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, 
ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಸುದೀಪ್  ಅವರನ್ನು ಹೃದಯ ಪೂರ್ವಕವಾಗಿ ಅಭಿನಂದಿಸುವುದಾಗಿ ಸಚಿವ ಸುಧಾಕರ್ ಹೇಳಿದ್ದಾರೆ.

Follow us on Social media

About the author