Breaking News

ಕೋವಿಡ್-19 ಪ್ರಕರಣ ಹೆಚ್ಚಳ:‌ ಬೆಂಗಳೂರಿನಲ್ಲಿ ಏ.20ರ ವರೆಗೆ ನಿಷೇಧಾಜ್ಞೆ ಜಾರಿ

ಬೆಂಗಳೂರು: ಕೋವಿಡ್‌-19 ನಿಯಂತ್ರಣಕ್ಕಾಗಿ ನಗರದಾದ್ಯಂತ ಕೋವಿಡ್‌ ನಿಯಮಾವಳಿ ಜಾರಿಯಲ್ಲಿದ್ದು, ಇದರ ಅನ್ವಯ ಏ.20ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಆಯುಕ್ತರು, ಈ ವೇಳೆ ನಗರದಲ್ಲಿ ಯಾವುದೇ ಗುಂಪು ಅಥವಾ ಸಂಘಟನೆಗಳು ಪ್ರತಿಭಟನೆ, ಧರಣಿ, ರ‍್ಯಾಲಿ, ಮುಷ್ಕರ ನಡೆಸುವಂತಿಲ್ಲ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಅಲ್ಲದೇ, ಧಾರ್ಮಿಕ ಸ್ಥಳಗಳಲ್ಲಿ ಗುಂಪು ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಕಾರ್ಯಕ್ರಮಗಳಲ್ಲೂ ಹೆಚ್ಚು ಜನ ಸೇರುವಂತಿಲ್ಲ. ಈಜು ಕೊಳ ಹಾಗೂ ಜಿಮ್‌ಗಳಲ್ಲಿ ಶೇ. 50 ಮಂದಿಯೊಂದಿಗೆ ಕಾರ್ಯನಿರ್ವಹಿಸಬೇಕು. ಪಬ್, ಬಾರ್, ಕ್ಲಬ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಶೇ 50ರಷ್ಟು ಮಂದಿಗೆ ಆಸನ ವ್ಯವಸ್ಥೆ ಇರಬೇಕು. 

ಇನ್ನು, ಮಾಲ್‌, ಮಾರುಕಟ್ಟೆ, ಕಿರಾಣಿ ಅಂಗಡಿಗಳು ಸೇರಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆ ಸೇರಿ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಅಂತಹ ಸ್ಥಳಗಳನ್ನು ಮುಚ್ಚಲಾಗುವುದು ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸೂಚಿತ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‌ 188ರಡಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×