Breaking News

ಜ್ಯೂನ್ 18ಕ್ಕೆ ಪಿಯುಸಿ, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ: ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಇಂಗ್ಲಿಷ್ ಪರೀಕ್ಷೆ ವೇಳಾಪಟ್ಟಿ ಸೋಮವಾರ ಪ್ರಕಟವಾಗಿದ್ದು, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಅವರು ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಜೂನ್ 25ರಿಂದ ಜುಲೈ 4ರವರೆಗೆ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯಲಿವೆ. ಹಾಗೇ, ಜೂನ್ 18ಕ್ಕೆ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ ಎಂದರು.

ಪರೀಕ್ಷೆಗೆ ಬದಲಾದ ಪರಿಸ್ಥಿತಿಯಲ್ಲಿ ಹೆಚ್ಚುವರಿ ಕೊಠಡಿ ಬಳಸುತ್ತೇವೆ. 2879 ಪರೀಕ್ಷಾ ಕೇಂದ್ರಗಳಲ್ಲಿ 43720 ಕೊಠಡಿ ಬಳಸುತ್ತಿದ್ದೇವೆ.  ಆರೋಗ್ಯ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಪ್ರತಿ ಸಭಾಂಗಣದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡುತ್ತೇವೆ. ಪರೀಕ್ಷೆ ನಡೆಯುವ ಶಾಲೆಗಳ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಮತ್ತು ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಂಬೆಸಿ ಗ್ರೂಪ್ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಒದಗಿಸಲಿದೆ. ಥರ್ಮಲ್ ಸ್ಕಾನರ್ ಮೂಲಕ ವಿದ್ಯಾರ್ಥಿಗಳ ತಪಾಸಣೆ ಮಾಡಲಾಗುತ್ತದೆ. ಜ್ವರದ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಚಂದನ ವಾಹಿನಿ ಮೂಲಕ ನಡೆಸಲಾಗುತ್ತಿರುವ ಪುನರ್ ಮನನ ಕಾರ್ಯಕ್ರಮ ಈ ತಿಂಗಳ ಅಂತ್ಯದವರೆಗೆ ಮುಂದುವರೆಯಲಿದೆ ಎಂದರು.

ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಗಳನ್ನು ಯಾವಾಗ ಆರಂಭ ಮಾಡಬೇಕು ಎಂಬ ಚರ್ಚೆಯೂ ನಡೆಯುತ್ತಿದೆ. ಈ ವರ್ಷ ಯಾವುದೇ ಶಾಲೆಗಳು ಶುಲ್ಕದಲ್ಲಿ ಹೆಚ್ಚಳ ಮಾಡದಂತೆ ಸೂಚಿಸಿದ್ದೇವೆ. ಸಾಧ್ಯವಾದರೆ ಕಡಿಮೆ ಮಾಡಿ ಎಂದು ಸರ್ಕಾರ ಸೂಚಿಸಿದೆ. ಈಗಾಗಲೇ ಕಾಲೇಜು ವಿದ್ಯಾರ್ಥಿಗಳಿಗೆ ಆನ್​ಲೈನ್​ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.

ಕೇಂದ್ರ ಸರ್ಕಾರ ನಿನ್ನೆಯಷ್ಟೇ ದೇಶಾದ್ಯಂತ ಮೇ 31ರವರೆಗೆ ಲಾಕ್​ಡೌನ್​ ವಿಸ್ತರಿಸಿದ್ದು, ಯಾವುದೇ ಶಾಲಾ, ಕಾಲೇಜುಗಳನ್ನು ತೆರೆಯದಂತೆ ಆದೇಶ ಹೊರಡಿಸಲಾಗಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×