Breaking News

ತುಮಕೂರು : ಶಾಲೆಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ಇಲ್ಲ -ಸಚಿವ ಬಿ.ಸಿ. ನಾಗೇಶ್

ತುಮಕೂರು : ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರ ಹೊರತುಪಡಿಸಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.

  • ತಿಪಟೂರಿನಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಚೌತಿ ಆಚರಣೆ ಹಿಂದಿನಿಂದಲೂ ನಡೆದುಕೊಂಡು ಬಂದ ಪದ್ದತಿ. ಅದನ್ನೇ ಮುಂದುವರಿಸಲಾಗುತ್ತಿದೆ. ಆದರೆ ಹೊಸದಾಗಿ ಬೇಡಿಕೆ ಬಂದಿರುವ ಯಾವುದೇ ಧಾರ್ಮಿಕ ಆಚರಣೆಗಳಿಗೆ ಶಾಲೆಗಳಲ್ಲಿ ಅವಕಾಶ ನೀಡಿಲ್ಲ, ನೀಡುವುದೂ ಇಲ್ಲ ಎಂದರು.ಸ್ವಾತಂತ್ರ್ಯ ಪೂರ್ವದಲ್ಲಿಯೇ ಆರಂಭವಾದ ಹಬ್ಬ ಗಣಪತಿ ಹಬ್ಬ. ಭಾರತೀಯರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಒಗ್ಗೂಡಿಸುವ ಸಲುವಾಗಿ ಬಾಲಗಂಗಾಧರ ತಿಲಕ್ ಅವರು ಆರಂಭಿಸಿದ ಹಬ್ಬವಿದು. ಅದನ್ನು ನಿಲ್ಲಿಸುವುದಕ್ಕೆ ಆಗುವುದಿಲ್ಲ ಎಂದವರು ಇದೇ ವೇಳೆ ಪ್ರತಿಕ್ರಿಯಿಸಿದರು.
Follow us on Social media

About the author