Breaking News

ಬಂಟ್ವಾಳ : ಆಟೋ ರಿಕ್ಷಾ ಮತ್ತು ಬೈಕ್‌ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ, ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಬಂಟ್ವಾಳದ ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ.

ನಡೆದ ಘಟನೆಯಲ್ಲಿ ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನಾಥ, ರಿಕ್ಷಾ ಪ್ರಯಾಣಿಕ ಶಂಕರ, ಬೈಕ್ ಸವಾರ ಬೆಳ್ತಂಗಡಿ ಉಜಿರೆ ನಿವಾಸಿ ಜೊಸ್ಟಿಲಿನ್ ಡಿಸೋಜ, ಸಹಸವಾರ ರಶ್ಮಿತ್ ಗಾಯಗೊಂಡವರಾಗಿದ್ದಾರೆ.

ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ಹಾಗೂ ಬಿಸಿರೋಡಿನಿಂದ ಬಂಟ್ವಾಳ ಕಡೆಗೆ ಹೋಗುತ್ತಿರುವ ಆಟೋರಿಕ್ಷಾಗಳು ಮುಖಾಮುಖಿಯಾಗಿ ಡಿಕ್ಕಿಯಾದ ಘಟನೆ ಭಂಡಾರಿಬೆಟ್ಟು ಎಂಬಲ್ಲಿ ಅಪಘಾತ ಸಂಭವಿಸಿದೆ.

ಈ ಅಪಘಾತದ ರಭಸಕ್ಕೆ ಎರಡು ಗಾಡಿಗಳು ಜಖಂಗೊಂಡಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಆಗಮಿಸಿ, ಈ ಪ್ರಕರಣ ದಾಖಲಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×