Breaking News

ಮಂಗಳೂರು :ಜಪ್ಪಿನಮೊಗರು ಸಮೀಪ ಅಪಘಾತ: ಓರ್ವ ಮೃತ್ಯು; ಐವರಿಗೆ ಗಾಯ

ಮಂಗಳೂರು : ಕಲ್ಲಾಪು ಬಳಿಯಲ್ಲಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು ಐವರು ಗಾಯಗೊಂಡ ಘಟನೆ ಮೇ 31 ರ ಭಾನುವಾರ ಮುಂಜಾನೆ ನಡೆದಿದೆ.

ಮೃತನನ್ನು ಕಾವೂರು ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ.ಬೆಳಿಗ್ಗೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು ಚೇತನ್ ಕಾರು ಚಲಾಯಿಸುತ್ತಿದ್ದ ಎಂದು ತಿಳಿದುಬಂದಿದೆ.ಲಾರಿಗೆ ಕಾರು ಹಿಂದಿನಿಂದ ನುಗ್ಗಿದ್ದು ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×