Breaking News

ಮಂಗಳೂರು: ಬಟ್ಟೆ ಗುಂಡಿ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ-ವಿಮಾನ ನಿಲ್ದಾಣದಲ್ಲಿ ಆರೋಪಿ ವಶಕ್ಕೆ

ಮಂಗಳೂರು : ಚಿನ್ನವನ್ನು ಬಟ್ಟೆ ಗುಂಡಿಗಳ ರೂಪದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ ಅಧಿಕಾರಿಗಳು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಈತ ದುಬೈನಿಂದ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ಚಿನ್ನವನ್ನು ಬಟ್ಟೆ ಗುಂಡಿಯ ರೂಪದಲ್ಲಿ ಬಟ್ಟೆಗಳಿಗೆ ಪೋಣಿಸಿ ತಂದಿರುವುದು ಪತ್ತೆಯಾಗಿದೆ. ಆರೋಪಿಯಿಂದ ಒಟ್ಟು 100 ಗ್ರಾಂ. ತೂಕದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಆರೋಪಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

Follow us on Social media

About the author