Breaking News

ಮಂಗಳೂರು: ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ-ಆರೋಪಿ ಬಂಧನ

ಮಂಗಳೂರು : ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಿಯನ್ನು ಬಿ.ಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಪ ಎಂದು ಗುರುತಿಸಲಾಗಿದೆ

ಇಂಟವ್ಯೂ ನಿಮಿತ್ತ ಖಾಸಗಿ ಬಸ್ ನಲ್ಲಿ ಮಂಗಳೂರಿಗೆ ಬರುತ್ತಿದ್ದಾ ಜೂ.೭ ರ ಮುಂಜಾನೆ ೫ ಗಂಟೆಗೆ ತಾನು ಪ್ರಯಾಣಿಸುತ್ತಿದ್ದಾಗ ಬಲಭಾಗದಲ್ಲಿ ಡ್ರೈವರ ಸೀಟ್ ಹಿಂಬಾಗದ ಸ್ಲೀಪರ್ ಸೀಟ್ ನಲ್ಲಿದ್ದ ಮುಸ್ತಾಪ ಅನುಚಿತವಾಗಿ ವರ್ತಿಸಿದ್ದು, ಈ ವೇಳೆ ಬಸ್ಸಿನ ಸಿಬ್ಬಂದಿಗೆ ಹೇಳಬೇಕೆಂದಾಗ ಪಂಪವೆಲ್ ಸ್ಟಾಪಿನಲ್ಲಿ ಬಸ್ಸಿನಿಂದ ಇಳಿದು ಓಡಿಹೋಗಿದ್ದಾನೆ ಎಂದು ಕಂಕನಾಡಿ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾರೆ .ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×