Breaking News

ರಾಜ್ಯದಲ್ಲಿ ಇಂದು ಕೊರೋನಾಗೆ 87 ಬಲಿ, ಬೆಂಗಳೂರಿನಲ್ಲಿ 1975 ಸೇರಿ 3176 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 87 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 929ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 60 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 87 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1975 ಪ್ರಕರಣಗಳು ವರದಿಯಾಗಿದ್ದು,
ರಾಜ್ಯದಲ್ಲಿ ಒಟ್ಟು 3176 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 47,253ಕ್ಕೇರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 1076 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 18466 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×