Breaking News

ರಾಜ್ಯದಲ್ಲಿ ಇಂದು ಕೊರೋನಾಗೆ 14 ಬಲಿ, 397 ಜನರಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 10118ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 14 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 164ಕ್ಕೇರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಐವರು ಒಟ್ಟು 14 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ 173 ಹಾಗೂ ಕಲಬುರಗಿಯಲ್ಲಿ 34 ಮಂದಿ ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ 397 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10118ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಬುಧವಾರ 149 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 6151ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 3799 ಸಕ್ರಿಯ ಪ್ರಕರಣಗಳಿದ್ದು, 112 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಪತ್ತೆಯಾದ 397 ಸೋಂಕಿತರ ಪೈಕಿ 8 ಮಂದಿ ಅಂತರಾಷ್ಟ್ರೀಯ ಪ್ರಯಾಣ ಹಿನ್ನೆಲೆ ಹಾಗೂ 75 ಮಂದಿ ಹೊರರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×