Breaking News

ರಾಜ್ಯದಲ್ಲಿ ಇಂದು ಕೊರೋನಾಗೆ 17 ಬಲಿ, ಬೆಂಗಳೂರಿನಲ್ಲಿ 1373 ಸೇರಿ 2282 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ 17 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 487ಕ್ಕೇರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಒಟ್ಟು 17 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1373 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 2282 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 31, 159ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಗುರುವಾರ ಒಂದೇ ದಿನ 957 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೆ ಬೆಂಗಳೂರಿನಲ್ಲಿ ಇಂದು 606 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

Follow us on Social media

About the author