Breaking News

ರಾಜ್ಯದಲ್ಲಿ ಕೊರೋನಾಗೆ ಇಂದು 8 ಬಲಿ, 204 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 8 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 102ಕ್ಕೇರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಐವರು, ಶಿವಮೊಗ್ಗ, ಬಳ್ಳಾರಿ ಹಾಗೂ ಬೀದರ್ ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಹೊಸದಾಗಿ 204 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, 4804 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರಿನಲ್ಲಿ 55, ಯಾದಗಿರಿ 37, ಬಳ್ಳಾರಿ 29, ಕಲಬುರಗಿ 19 ಹಾಗೂ ಬೀದರ್ 12 ಮಂದಿ ಸೇರಿದಂತೆ ರಾಜ್ಯದಲ್ಲಿ ಇಂದು 204 ಮಂದಿಗೆ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Follow us on Social media

About the author