ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 349 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 161 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,49,662ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಇಂದು 399 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,36,926ಕ್ಕೆ ಏರಿಕೆಯಾಗಿದೆ. ಇನ್ನು 9,100 ಸಕ್ರೀಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು 85,022 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 349 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.41ಕ್ಕೆ ಇಳಿದಿದೆ.
Follow us on Social media