Breaking News

ರಾಜ್ಯದಲ್ಲಿ ಹೆಚ್ಚಿದ ಹೆಮ್ಮಾರಿ ಓಮಿಕ್ರಾನ್ ಆತಂಕ: ಆಕ್ಸಿಜನ್ ತಯಾರಿಕಾ ಘಟಕ ಸಿದ್ಧವಾಗಿರಿಸಿಕೊಳ್ಳುವಂತೆ ಆಸ್ಪತ್ರೆಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಳಗಾವಿ: ಕಳೆದ ವಾರ ದೇಶದಲ್ಲಿ ಪ್ರಮುಖವಾಗಿ ನೆರೆ ರಾಜ್ಯ ಮಹಾರಾಷ್ಟ್ರ ಮತ್ತು ಅದರ ರಾಜಧಾನಿ ಮುಂಬೈನಲ್ಲಿ ಕೋವಿಡ್ -19 ಮತ್ತು ‘ಓಮಿಕ್ರಾನ್’ ರೂಪಾಂತರದ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳಗೊಂಡಿದ್ದು, ಈ ಬೆಳವಣಿಗೆ ರಾಜ್ಯದಲ್ಲಿನ ಆತಂಕವನ್ನು ಸಾಕಷ್ಟು ಹೆಚ್ಚಾಗುವಂತೆ ಮಾಡಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ಭಾಗಗಳಲ್ಲಿ ವಾಸಿಸುವ ಜನರು ವ್ಯಾಪಾರ-ವಹಿವಾಟಿನ ಸಂಬಂಧಗಳನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಹೆಚ್ಚಳಗೊಳ್ಳುವ ಭೀತಿ ಎದುರಾಗಿದೆ.

ಹೀಗಾಗಿ ಬೆಳಗಾವಿ, ವಿಜಯಪುರ ಹಾಗೂ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ ಇರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಸೋಮವಾರ ‌ಮುಖ್ಯಮಂತ್ರಿಗಳ ಪ್ರವಾಸದ ಹಿನ್ನಲೆಯಲ್ಲಿ ಭಾನುವಾರ ಸಚಿವರು ಕಾರ್ಯಕ್ರಮಗಳ ಪೂರ್ವ ಸಿದ್ದತೆಗಳನ್ನು ಪರಿಶೀಲನೆ ನಡೆಸಿದರು.

ಬಳಿಕ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಪ್ರಯಾಣಿಸುವ ಜನರು ಎರಡು ಡೋಸ್ ಲಸಿಕೆ ಪಡೆದುಕೊಂಡಿರುವ ಪ್ರಮಾಣಪತ್ರವನ್ನು ಹೊಂದಿರಬೇಕು ಮತ್ತು ನೆಗೆಟಿವ್ RT-PCR ಪರೀಕ್ಷಾ ಪ್ರಮಾಣಪತ್ರವನ್ನು ಕಡ್ಡಾಯ ಮಾಡಲಾಗಿದೆ. ನಿಯಮಗಳಿಂದ ಕೆಲವು ಪ್ರಯಾಣಿಕರು ಅನಾನುಕೂಲತೆಯನ್ನು ಎದುರಿಸಬಹುದು. ಆದರೆ ರಾಜ್ಯದ ಮತ್ತು ವಿಶೇಷವಾಗಿ ಬೆಳಗಾವಿಯ ಜನರ ಆರೋಗ್ಯದ ದೃಷ್ಟಿಯಿಂದ ಈ ಕ್ರಮಗಳು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಸೋಂಕು ತಡೆಗಟ್ಟುವಿಕೆಯ ಜೊತೆಗೆ ಯಾವುದೇ ಸಂಭವನೀಯ ಪರಿಸ್ಥಿತಿಯನ್ನು ಎದುರಿಸಲು ನಾವು ಸಿದ್ಧರಾಗಿರಬೇಕು. ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಮೊದಲ ಮತ್ತು ಎರಡನೇ ಅಲೆಯ ಸಮಯದಲ್ಲಿ ಆಮ್ಲಜನಕದ ಕೊರತೆ ಇತ್ತು. ಆದ್ದರಿಂದ, ಈಗಾಗಲೇ ವೈದ್ಯಕೀಯ ಆಮ್ಲಜನಕ ತಯಾರಿಕಾ ಕಂಪನಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಸೂಕ್ತ ರೀತಿಯಲ್ಲಿ ಆಮ್ಲಜನಕ ಪೂರೈಕೆ ಮಾಡುವಂತೆ ಮನವಿ ಮಾಡಿಕೊಂಡಿದ್ದೇನೆ.

ಎಲ್ಲಾ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿನ ಅಧಿಕಾರಿಗಳಿಗೆ ಆಕ್ಸಿಜನ್ ತಯಾರಿಕಾ ಘಟಕಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ 4,000 ಕ್ಕೂ ಹೆಚ್ಚು ಐಸಿಯು ಹಾಸಿಗೆಗಳನ್ನು ಸಿದ್ಧವಾಗಿ ಇರಿಸಲಾಗುವುದು ಮತ್ತು ಅಗತ್ಯ ಔಷಧಿಗಳನ್ನು ಲಭ್ಯವಾಗುವಂತೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

15 ರಿಂದ 18 ವರ್ಷದೊಳಗಿನ ಯುವಕರ ಆರೋಗ್ಯ ರಕ್ಷಣೆ ಮಾಡಲು ಅವರಿಗೆ ಲಸಿಕೆ ಹಾಕವು ಸರ್ಕಾರ ನಿರ್ಧರಿಸಿದ್ದು. ಈ ನಿಟ್ಟಿನಲ್ಲಿ ಜನವರಿ 3 ರಿಂದ ರಾಜ್ಯಾದ್ಯಂತ ಅಭಿಯಾನ ಆರಂಭವಾಗಲಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×