Breaking News

ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ.14ರಿಂದ ಶಾಲೆ ಪ್ರಾರಂಭ, ಅ.3ರಿಂದ ದಸರಾ ರಜೆ

ಬೆಂಗಳೂರು : 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ.14ರಿಂದ ಶಾಲೆ ಆರಂಭವಾಗಲಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನುಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ವರ್ಷವನ್ನು ಕಲಿಕಾ ಚೇತರಿಕೆ ವರ್ಷವೆಂದು ಸಂಕಲ್ಪಿಸಲಾಗಿದ್ದು, ವಾರ್ಷಿಕ ಪಠ್ಯವಸ್ತು ಬೋಧನೆಯನ್ನು ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ಸಂಯೋಜಿಸಿ, ವಾರ್ಷಿಕ ಕಾರ್ಯಸೂಚಿಯನ್ನು ತಯಾರಿಸಲಾಗಿದೆ ಎಂದು ಹೇಳಿದೆ.

ಇನ್ನು 2022-23ನೇ ಶೈಕ್ಷಣಿಕ ವೇಳಾಪಟ್ಟಿಯಂತೆ ಮೇ 14ರಿಂದ ಶಾಲೆ ಪ್ರಾರಂಭ ಮತ್ತು ಪ್ರಾರಂಭೋತ್ಸವದ ಪೂರ್ವ ಸಿದ್ಧತೆ ಆರಂಭಗೊಳ್ಳಲಿದೆ. ಅಕ್ಟೋಬರ್ 03 ರಿಂದ ಅಕ್ಟೋಬರ್ 16ರವರೆಗೆ ದಸರಾ ರಜೆಯನ್ನು ಘೋಷಿಸಲಾಗಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×