Breaking News

ಹಾಸನ : ಪ್ರೇಯಸಿಯಿಂದ ಮೋಸ – ವಿಡಿಯೋ ಮಾಡಿ ಯುವಕ ಆತ್ಮಹತ್ಯೆ

ಹಾಸನ : ಹಾಸನ ಜಿಲ್ಲೆಯ ಅರಸಿಕೆರೆಯ ಯುವಕನೊಬ್ಬ ತಾನು ಪ್ರೀತಿಸಿದ ಹುಡುಗಿ ಮೋಸ ಮಾಡಿದ್ದಕ್ಕೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ದಿಲೀಪ್ ಎಂದು ಗುರುತಿಸಲಾಗಿದೆ.

ಕೆಲ‌ ವರ್ಷಗಳಿಂದ ದಿಲೀಪ್​ ಮತ್ತು ಕುಟುಂಬಸ್ಥರು ಬೆಂಗಳೂರಿನಲ್ಲಿ ನೆಲೆಸಿದ್ದು ಎಲ್ಲರೂ ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದು, ಅದೇ ಗಾರ್ಮೆಂರ್ಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಬೆಟ್ಟದಕೂರ್ಲಿ ಗ್ರಾಮದ ಯುವತಿಯೊಬ್ಬಳನ್ನು ದಿಲೀಪ್​ ಪ್ರೀತಿಸುತ್ತಿದ್ದರು.

ಇನ್ನು ಯುವತಿಯು ಮನೆಯ ಕಾರಣ ನೀಡಿ ಪ್ರೀತಿ ಮಾಡುವುದಿಲ್ಲ ಎಂದಿದ್ದಾಳೆ. ಇದರಿಂದ ನೊಂದುಕೊಂಡಿರುವ ದಿಲೀಪ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಿಯರು ನೋಡಿ ತಕ್ಷಣ ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರೂ ದಿಲೀಪ್​ ಬದುಕಲಿಲ್ಲ. ಸಾಯುವ ಮುನ್ನ ವಿಡಿಯೋ ರೆಕಾರ್ಡ್​ ಮಾಡಿದ್ದು, ಯುವತಿಯ ಹೆಸರು ಹೇಳಿ ಆಕೆ ನನಗೆ ಮೋಸ ಮಾಡಿದ್ದಾಳೆ ನನ್ನ ಸಾವಿಗೆ ಯುವತಿ ಮತ್ತು ಅವಳ ಕುಟುಂಬದವರೇ ಕಾರಣ ಎಂದು ಹೇಳಿದ್ದಾರೆ.

ಇನ್ನು ಈ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×