Breaking News

ಹೈದರಾಬಾದ್ : ಊಟದ ಮೆನುವಿನಲ್ಲಿ ಮಟನ್ ಪೀಸ್ ಇಲ್ಲವೆಂದು ಮದುವೆ ಕ್ಯಾನ್ಸಲ್

ಹೈದರಾಬಾದ್ : ಊಟದ ಮೆನುವಿನಲ್ಲಿ ಮಟನ್ ಪೀಸ್ ಇಲ್ಲವೆಂದು ವರನ ಕಡೆಯವರು ಮದುವೆ ರದ್ದು ಮಾಡಿದ ಘಟನೆ ತೆಲಂಗಾನದಲ್ಲಿ ನಡೆದಿದೆ.

ನಿಜಾಮಾಬಾದ್‍ನ ವಧು ಹಾಗೂ ಜಗ್ತಿಯಾಳ್ ಮೂಲದ ವರನಿಗೆ ಈ ಹಿಂದೆ ನಿಶ್ಚಿತಾರ್ಥವಾಗಿದ್ದು, ಬಳಿಕ ಮದುವೆ ನಿಶ್ಚಯವಾಗಿತ್ತು. ಹಾಗಾಗಿ ಮದುವೆಗೆ ವಧುವಿನ ಮನೆಯವರು ತಮ್ಮ ಕುಟುಂಬ ಸದಸ್ಯರು ಮತ್ತು ವರನ ಸಂಬಂಧಿಕರು ಸೇರಿದಂತೆ ಅತಿಥಿಗಳಿಗಾಗಿ ಮಾಂಸಾಹಾರಿ ಮೆನುವನ್ನು ಏರ್ಪಡಿಸಿದ್ದರು.

ಆದರೆ ಈ ಊಟದ ಮೆನುವಿನಲ್ಲಿ ಮಟನ್ ಐಟಮ್ ಇರಲಿಲ್ಲ. ಇದನ್ನು ಗಮನಿಸಿದ ವರನ ಕಡೆಯವರು ಮಟನ್ ಬೇಕು ಎಂದು ಹಠಕ್ಕೆ ಬಿದ್ದರು. ಈ ಸಂಬಂಧ ಎರಡೂ ಮನೆಯವರಿಗೂ ಜಗಳ ಆರಂಭವಾಗಿದೆ.

ಈ ವೇಳೆ ಮಾತಿಗೆ ಮಾತು ಬೆಳೆದ ಪರಿಣಾಮ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದರು. ಘಟನಾ ಸ್ಥಳಕ್ಕೆ ಆಗಮಸಿದ ಪೊಲೀಸರು ಗಲಾಟೆಯನ್ನು ನಿಯಂತ್ರಿಸಲು ಮುಂದಾಗಿ, ವರನ ಕುಟುಂಬದವರನ್ನು ಸಮಾಧಾನಪಡಿಸಲು ಯತ್ನಿಸಿದರು. ಆದರೆ ವಧುವಿನ ಕಡೆಯವರು ನಮಗೆ ಅವಮಾನ ಮಾಡಿದರೆಂದು ಹೇಳಿ ವರನ ಕಡೆಯವರು ಆಕ್ರೋಶಗೊಂಡರು.

ವಧುವಿನ ಕಡೆಯವರು ಉದ್ದೇಶಪೂರ್ವಕವಾಗಿಯೇ ಮಟನ್ ಕರ್ರಿ ಮಾಡಿಲ್ಲ ಎಂದು ವರನ ಕಡೆಯವರು ಆರೋಪಿಸಿದರು. ಈ ಜಗಳ ತಾರಕಕ್ಕೇರಿ ಕೊನೆಗೆ ಮದುವೆಯನ್ನೇ ರದ್ದು ಮಾಡುವುದಾಗಿ ನಿರ್ಧಾರ ಮಾಡಲಾಗಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×