Breaking News

ಬಂಟ್ವಾಳ : ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ!

ನಿಗೂಢವಾಗಿ  ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್  ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

  • ಸುಮಾರು 10 ದಿನದ ಬಳಿಕ ದಿಗಂತ್‌ ಪತ್ತೆಯಾಗಿದ್ದು, ಪೊಲಿಸರು ಆತನನ್ನು ಕರೆತರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ  ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು. ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ದಿಗಂತ್‌. ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು.
Follow us on Social media

About the author