Breaking News

ಉಡುಪಿ: ಯುವಕನಿಂದ ಯುವತಿಯ ಅಪಹರಣ, ಲವ್‌ ಜಿಹಾದ್‌ ಆರೋಪ : ದೂರು!

ಉಡುಪಿ: ಲವ್‌ ಜಿಹಾದ್‌ ಆರೋಪವೊಂದು ದಾಖಲಾಗಿದೆ. ಕ್ರೈಸ್ತ ಯುವತಿಯನ್ನು ಮುಸ್ಲಿಂ ಯುವಕ ಕರೆದೊಯ್ದಿದ್ದು, ಮದುವೆಯಾಗಲು ನೋಂದಣಿ ಮಾಡಿಸಿದ್ದಾನೆ. ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಕೊಳ್ಳಲು ಯುವಕ ಯತ್ನಿಸಿದ್ದಾನೆ, ಇದು ಲವ್‌ ಜಿಹಾದ್‌ ಆಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬವನು ನನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಗಾಡ್ವಿನ್ ದೇವದಾಸ್ ದೂರು ನೀಡಿದ್ದಾರೆ.

ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದಂತೆ ಮೊಹಮ್ಮದ್ ಅಕ್ರಮ್ ಉಡುಪಿ ಉಪ ನೋಂದಣಿ ಕಚೇರಿಯಲ್ಲಿ ವಿಶೇಷ ವಿವಾಹದಡಿ ಅರ್ಜಿ ಸಲ್ಲಿಸಿದ್ದಾರೆ.

ಯುವತಿ ಕ್ರೈಸ್ತ ಧರ್ಮಕ್ಕೆ ಸೇರಿದವರಾಗಿದ್ದು, ಕಾಲೇಜಿನಿಂದ ವಾಪಸು ಮನೆಗೆ ತೆರಳುವಾಗ ಅಪಹರಿಸಲಾಗಿದೆ ಎನ್ನಲಾಗಿದೆ. ಗಾಡ್ವಿನ್ ದೇವದಾಸ್ ಈ ಹಿಂದೆ ಅಕ್ರಮ್ ಮೊಹಮ್ಮದ್ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ್ದರು. ಈ ಸೇಡು ತೀರಿಸಿಕೊಳ್ಳಲು ಅಕ್ರಮ್ ಮೊಹಮ್ಮದ್ ನನ್ನ ಮಗಳನ್ನು ಅಪಹರಿಸಿ, ಬೆದರಿಸಿ ವಿವಾಹ ನೊಂದಣಿಗೆ ಸಹಿ ಹಾಕಿಸಿದ್ದಾನೆ ಎಂದು ದಾಖಲಿಸಿದ್ದಾರೆ.

ನಮ್ಮ ಮಗಳನ್ನು ಅಕ್ರಮ್ ಅಪಹರಿಸಿದ್ದಾನೆ. ಅಪ್ರಾಪ್ತೆಯಾಗಿದ್ದಾಗಲೇ ಮಗಳಿಗೆ ಅಕ್ರಂ ಕಿರುಕುಳ ನೀಡಿದ್ದ. ಐದು ವರ್ಷದ ಹಿಂದೆ ಪೋಕ್ಸೋ ಕೇಸು ದಾಖಲು ಮಾಡಿದ್ದೆವು. ಲೈಂಗಿಕ ಕಿರುಕುಳ ನೀಡಿಲ್ಲ ಎಂಬ ಕಾರಣಕ್ಕೆ ಕೇಸು ವಜಾಗೊಂಡಿತ್ತು. ಇದೀಗ, ಸೇಡು ತೀರಿಸಲು ಅಪಹರಿಸಿದ್ದಾನೆ ಎಂದು ಪೋಷಕರಾದ ಮೇರುಸ್ ಪುಷ್ಪಲತಾ ಮತ್ತು ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ.

ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Follow us on Social media

About the author