ಪುತ್ತೂರು: ಕಾರೊಂದರಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ್ದ ಪ್ರಕರಣವೊಂದನ್ನು ಪತ್ತೆ ಮಾಡಿರುವ ಪುತ್ತೂರು ನಗರ ಠಾಣೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಟ್ಯಾರು ನಿವಾಸಿ ಇಸುಬು ಫೈಝಲ್ (30) ಮತ್ತು ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಸಮೀಪದ ದಾರಂದಕುಕ್ಕು ನಿವಾಸಿ ತಸ್ಲೀಫ್ (26) ಆರೋಪಿಗಳು.
ಪುತ್ತೂರು ನಗರ ಠಾಣೆ ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜ ಅವರು ಸಿಬ್ಬಂದಿಯೊಂದಿಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಪೊಲೀಸರು ಪರಿಶೀಲಿಸಿದ ವೇಳೆ 25 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, ಅದರ ಮೌಲ್ಯ 52ಸಾವಿರ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಬ್ಬರನ್ನು ಬಂಧಿಸಿ, ಕಾರು, ಹಾಗೂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
Follow us on Social media