Breaking News

ಅಜೆಕಾರು: ಬಾಲಕೃಷ್ಣ ಕೊಲೆ ಪ್ರಕರಣ; ದಿಲೀಪ್‌ ಹೆಗ್ಡೆಗೆ ಹೈಕೋರ್ಟ್‌ ಜಾಮೀನು!

ಉಡುಪಿ: ಅಜೆಕಾರು ಪೊಲೀಸ್‌ ಠಾಣೆ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ (44) ಕೊಲೆ ಪ್ರಕರಣದ ಆರೋಪಿ ದಿಲೀಪ್‌ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ.

ದಿಲೀಪ್‌ ಹೆಗ್ಡೆ ಜಾಮೀನು ಅರ್ಜಿಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮಾ.4ರಂದು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಆರೋಪಿ ದಿಲೀಪ್‌ ಹೆಗ್ಡೆಗೆ ಜಾಮೀನು ನೀಡಿದೆ. ಆರೋಪಿ ಪರ ನ್ಯಾಯವಾದಿ ನಿಶ್ಚಿತ್‌ ಕುಮಾರ್‌ ಶೆಟ್ಟಿ ವಾದಿಸಿದ್ದರು.

2024ರ ಅ.20ರಂದು ಬಾಲಕೃಷ್ಣ ಪೂಜಾರಿ ಅವರನ್ನು ಅವರ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಕೊಲೆಗೈದಿದ್ದರು. ಆರೋಪಿಗಳನ್ನು ಅ.25ರಂದು ಅಜೆಕಾರು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು.

Follow us on Social media

About the author