Breaking News

ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ.

ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ರಾತ್ರಿ 12:50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ.

ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ. ಈ ವೇಳೆ ರಿಕ್ಕಿ ರೈ, ಮೂಗು, ಕೈಗೆ ಗುಂಡು ತಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ

Follow us on Social media

About the author