ಉಡುಪಿ: ಅಕ್ರಮವಾಗಿ ನಡೆಯುತ್ತಿದ್ದ ಕೆಂಪುಕಲ್ಲು ಗಣಿಗಾರಿಕೆ ಬಗ್ಗೆ ಮಾಹಿತಿ ನೀಡದ ಕಾರಣಕ್ಕೆ 9 ಮಂದಿ ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಆದೇಶಿಸಿದ್ದಾರೆ.
‘ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆಯ ಬಗ್ಗೆ ಮಾಹಿತಿ ನೀಡದ್ದಕ್ಕೆ ಗಂಗೊಳ್ಳಿ, ಬೈಂದೂರು ಮತ್ತು ಕೊಲ್ಲೂರು ಪೊಲೀಸ್ ಠಾಣೆಗಳ ತಲಾ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಈ ಮೂರು ಠಾಣೆಗಳ ಸಬ್ ಇನ್‌ಸ್ಪೆಕ್ಟರ್‌ಗಳ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ’ ಎಂದು ಎಸ್‌ಪಿ ತಿಳಿಸಿದ್ದಾರೆ.
Follow us on Social media