ಉಡುಪಿ: ಮನೆಗೆ ಬೀಗ ಹಾಕಿ ಬ್ರಹ್ಮಕಲಶೋತ್ಸವಕ್ಕೆ ಹೋಗಿದ್ದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಳ್ಳಿಯ ಪ್ರಶಾಂತ (43) ಎಂಬವವರ ಮನೆಯಲ್ಲಿ ಕಳವು ನಡೆಸಲು ಯತ್ನ ನಡೆದಿದೆ. ಮನೆಯ ಬಾಗಿಲಿನ ಬೀಗ ಒಡೆದು ಒಳ ಪ್ರವೇಶಿಸಿದ ಕಳ್ಳರು ಎಲ್ಲ ಕಡೆಗಳಲ್ಲಿ ಹುಡುಕಾಟ ನಡೆಸಿದ್ದಾರೆ.
ಮನೆಯಲ್ಲಿ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಗದ ಕಾರಣ ಎಲ್ಲ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಪರಾರಿಯಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
Follow us on Social media