ಮಂಗಳೂರು: ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಆರೋಪದಡಿ ಬೆಳ್ತಂಗಡಿ ವಿಧಾನಸಭಾ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಶನಿವಾರ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ತೆಕ್ಕಾರು ನಿವಾಸಿ ಇಬ್ರಾಹಿಂ.ಎಸ್.ಬಿ ದೂರು ದಾಖಲಿಸಿದ್ದಾರೆ.
ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ ಧರ್ಮ, ಧರ್ಮಗಳ ನಡುವೆ ದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆಯಡಿ 196, 352(2) ಪ್ರಕರಣ ದಾಖಲಾಗಿದೆ.
Follow us on Social media