Breaking News

ಪಾಕ್‌ ಉಗ್ರರ 9 ನೆಲೆಗಳ ಮೇಲೆ ಏರ್‌ಸ್ಟ್ರೈಕ್‌

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಬಾಂಬ್‌ ದಾಳಿ ಮಾಡಿದೆ.

ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತ ತಡರಾತ್ರಿ 1:44ಕ್ಕೆ ದಾಳಿ ನಡೆಸಿದೆ. ರಫೇಲ್‌ ಯುದ್ಧ ವಿಮಾನಗಳನ್ನು ಬಳಸಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಏರ್‌ ಸ್ಟ್ರೈಕ್‌ ನಡೆದಿದೆ. ಈ ದಾಳಿಗಳಲ್ಲಿ ಮೂವತ್ತಕ್ಕೂ ಹೆಚ್ಚು ಉಗ್ರರು ಮೃತಪಟ್ಟಿರುವುದಾಗಿ ಕೆಲ ವರದಿಗಳು ತಿಳಿಸಿವೆ.

ಉಗ್ರರ 9 ಸ್ಥಳಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದ್ದೇವೆ. ಯಾವುದೇ ಯಾವುದೇ ಪಾಕಿಸ್ತಾನಿ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿಲ್ಲ ಎಂದು ಭಾರತೀಯ ಸೇನೆ ತಿಳಿಸಿದೆ. ಗುರಿ ಮಾಡಲಾದ 9 ಸ್ಥಳಗಳಲ್ಲಿ ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್ ಪ್ರಧಾನ ಕಚೇರಿ ಮತ್ತು ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೈಬಾ ಸೇರಿವೆ ಎಂದು ಮೂಲಗಳು ತಿಳಿಸಿವೆ.

ಒಂಬತ್ತು ಗುರಿಗಳಲ್ಲಿ ನಾಲ್ಕು ಪಾಕಿಸ್ತಾನದಲ್ಲಿ ಮತ್ತು ಐದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದವು. ಪಾಕಿಸ್ತಾನದಲ್ಲಿರುವ ಗುರಿಗಳಲ್ಲಿ ಬಹಾವಲ್ಪುರ್, ಮುರಿಡ್ಕೆ ಮತ್ತು ಸಿಯಾಲ್‌ಕೋಟ್‌ ಸೇರಿವೆ. ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಲು ವಿಶೇಷ ನಿಖರ ಯುದ್ಧಸಾಮಗ್ರಿಗಳನ್ನು ಬಳಸಲಾಗಿದೆ.

ಭಾರತದ 26 ಸಹೋದರಿಯರ ಕುಂಕುಮ ಅಳಿಸಿದ್ದಕ್ಕೆ ನಡೆಸಿದ ಪ್ರತೀಕಾರಕ್ಕೆ ʼಆಪರೇಷನ್ ಸಿಂಧೂರʼ ಎಂಬ ಹೆಸರನ್ನು ಇಡಲಾಗಿದೆ. ಉಗ್ರರ ಶಿಬಿರಗಳನ್ನು ಧ್ವಂಸ ಮಾಡಲಾಗಿರುವ ವಿಡಿಯೋಗಳು ಹರಿದಾಡುತ್ತಿವೆ.

Follow us on Social media

About the author