ಮಂಗಳೂರು: ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ದಾಳಿ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದ ಕರಾವಳಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕಾವಲು ಪಡೆ ಪೊಲೀಸರು ಅರಬ್ಬೀ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿದ್ದಾರೆ. ಕರಾವಳಿ ಕಾವಲು ಪಡೆ ಅಧಿಕಾರಿಗಳು ಮಂಗಳೂರಿನ ಬಂದರು ತೀರದಲ್ಲಿ ಪರಿಶೀಲನೆ ನಡೆಸಿದಿದ್ದಾರೆ. ಸಮುದ್ರ ಮಾರ್ಗದ ಮೀನುಗಾರಿಕಾ ಬೋಟ್, ಮೀನುಗಾರರನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಪೊಲೀಸರು ಮೀನುಗಾರರ ದಾಖಲೆಗಳನ್ನ ತಪಾಸಣೆ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಅನುಮಾನಾಸ್ಪದ ಬೋಟ್‌ಗಳ ಮೇಲೆ ನಿಗಾ ಇಟ್ಟಿದ್ದಾರೆ.
Follow us on Social media