ಮಂಗಳೂರು: ಕಾವೂರು ಠಾಣಾ ವ್ಯಾಪ್ತಿಯ ಪಂಜಿಮೊಗರು ಮತ್ತು ಶಾಂತಿನಗರ ಪ್ರದೇಶದಲ್ಲಿ ತಲವಾರು ಝಳಪಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಿಜೈ ನಿವಾಸಿ ವಿಷ್ಣು (18) ಮತ್ತು ಕಾಪಿಕಾಡ್ ಆಕಾಶಭವನ ನಿವಾಸಿ ವೇಣುಗೋಪಾಲ್ (19) ಬಂಧಿತ ಆರೋಪಿಗಳು.
ಸುಹಾಸ್ ಹತ್ಯೆಯ ಮರುದಿನ ಮೇ 2ರಂದು ಸಂಜೆ ವೇಳೆ ಆರೋಪಿಗಳು ತಲವಾರು ಝಳಪಿಸಿ ಸಾರ್ವಜನಿಕರಲ್ಲಿ ಭಯ ಮತ್ತು ಗಾಬರಿ ಹುಟ್ಟಿಸಿದ್ದಾರೆ. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿ ಕೆಮರಾ ಮತ್ತು ಪ್ರತ್ಯಕ್ಷದರ್ಶಿಗಳ ಮಾಹಿತಿಯನ್ವಯ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದು, ಬಾಡಿ ವಾರಂಟ್ ಪಡೆದು ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Follow us on Social media