ಉಡುಪಿ: ಅತಿಯಾದ ಮದ್ಯ ಸೇವನೆ ಮಾಡಿದ ವ್ಯಕ್ತಿ ತನ್ನದೇ ಮನೆಗೆ ಬೆಂಕಿ ಇಟ್ಟ ಘಟನೆ ಚಿಟ್ಪಾಡಿಯಲ್ಲಿ ನಡೆದಿದೆ.
ಕುಡುಕನ ರಂಪಾಟ, ಉಗ್ರ ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಬಂದ ಅವರು ಬೆಂಕಿಯನ್ನು ನಂದಿಸಿ ದೊಡ್ಡ ಪ್ರಮಾಣದಲ್ಲಿ ಆಗಬಹುದಾದ ಅಗ್ನಿದುರಂತವನ್ನು ತಪ್ಪಿಸಿದ್ದಾರೆ. ಬಳಿಕ ಮದ್ಯವ್ಯಸನಿಯನ್ನು ಮನವೊಲಿಸಿ ಮದ್ಯವರ್ಜನ ಕೇಂದ್ರಕ್ಕೆ ದಾಖಲಿಸಲಾಯಿತು.
Follow us on Social media