Breaking News

ಬಂಟ್ವಾಳ: ಲಾರಿಗಳ ನಡುವೆ ಅಪಘಾತ ; ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದು ಚಾಲಕ ಮೃತ್ಯು

ಬಂಟ್ವಾಳ : ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಲಾರಿ ಚಾಲಕನ ಮೇಲೆ ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದ ಪರಿಣಾಮ ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಸಜಿಪನಾಡು ಬಳಿ ನಡೆದಿದೆ.

ಮೃತರನ್ನು ಸಜೀಪನಡು ಗೋಳಿಪಡ್ಪು ನಿವಾಸಿ ರಫೀಕ್ ( 45) ಎಂದು ಗುರುತಿಸಲಾಗಿದೆ.

ಲಾರಿಯಲ್ಲಿದ್ದ ಕ್ಲೀನರ್ ಯೂಸುಫ್ ಎಂಬಾತನ ಕೈ ಕಾಲುಗಳ ಮೇಲೆ ಡಾಮರು ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದರೆ. ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಅಲ್ಪಾಸ್ ಎಂಬವರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಚಿನಡ್ಕಪದವು ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು , ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿ ಸಜೀಪನಡು ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಿಸಿ ಬಿಟುಮೆನ್ ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Follow us on Social media

About the author