ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ವಧುವಿಗೆ ವರ ತಾಳಿ ಕಟ್ಟಿದ ಕೇವಲ 15 ನಿಮಿಷಗಳಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಪ್ರವೀಣ ಕುರಣಿ (25) ಮೃತ ವರ.
ಪ್ರವೀಣ ಕುರಣಿ ಜಮಖಂಡಿ ತಾಲೂಕಿನ ಕುಂಬಾರ ಹಳ್ಳ ಗ್ರಾಮದ ನಿವಾಸಿ. ಈ ಘಟನೆ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿದ್ದು, ವರನ ಹಠಾತ್ ನಿಧನಕ್ಕೆ ಎರಡೂ ಕುಟುಂಬಗಳಿಗೆ ಆಘಾತ ತಂದಿದೆ. ಹೌದು, ಇಡೀ ನಂದೀಕೇಶ್ವರ ಕಲ್ಯಾಣ ಮಂಟಪದಲ್ಲಿ ಎರಡು ಕುಟುಂಬದವರು ಮದುವೆ ಸಂಭ್ರಮದಲ್ಲಿ ಬ್ಯುಸಿಯಾಗಿದ್ದರು. ಆದರೆ, ಈ ಸಂಭ್ರಮ ಬಹಳ ಕಾಲ ಉಳಿಯಲೇ ಇಲ್ಲ. ಹೊಸ ಜೀವನ ಆರಂಭಿಸೋ ಮೊದಲೇ ವರ ಬದುಕಿಗೆ ವಿದಾಯ ಹೇಳಿದ್ದಾನೆ.
ತಾಳಿ ಕಟ್ಟಿ ಕೇವಲ 15 ನಿಮಿಷದಲ್ಲೇ ವರನಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸಬೇಕು ಎನ್ನುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಜೀವಬಿಟ್ಟಿದ್ದಾನೆ. ಇನ್ನೂ ಬಾಳಿ ಬದುಕಬೇಕಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Follow us on Social media