ಬೆಳ್ತಂಗಡಿ: ಮೇ 17 ರಂದು ಪಂಜಾಬ್ ನಲ್ಲಿ ಧರ್ಮಸ್ಥಳದ ಗ್ರಾಮದ ಬೊಳಿಯಾರ್ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22) ನಿಗೂಢವಾಗಿ ಸಾವನ್ನಪ್ಪಿದ್ದು ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಸರ್ಟಿಫಿಕೇಟ್ ಪಡೆಯಲು ಹೋದ ಆಕೆ ತಾನು ಕಲಿತ ಫಗ್ವಾರ ಎಲ್ ಪಿಯು ಕಾಲೇಜಿನ ಮಹಡಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಲೇಜಿಗೆ ಹೋದ ಆಕೆ ಅಲ್ಲಿನ ಕೇರಳ ಮೂಲದ ಪ್ರಾಧ್ಯಾಪಕರನ್ನು ಭೇಟಿ ಮಾಡಲು ಹೋಗಿದ್ದು, ಈ ವೇಳೆ ಅವರಿಬ್ಬರ ಮಧ್ಯೆ ಜಗಳ ನಡೆದಿದ್ದು, ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media