Breaking News

ಭಾರೀ ಮಳೆ – ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಉಡುಪಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಂಗಳವಾರ (ಮೇ.20) ಮುಂಜಾನೆಯಿಂದಲೇ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಅದರಂತೆ ಅಗತ್ಯ ಮುನ್ನೆಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ನಗರ ಸಭೆ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತ್‌ ಗಳಿಗೆ ಜಿಲ್ಲಾಡಳಿತ ನಿರ್ದೇಶನ ನೀಡಲಾಗಿತ್ತು.

ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚಿಸಲಾಗಿತ್ತು. ವಿಪರೀತ ಮಳೆಯ ಹಿನ್ನೆಲೆಯಲ್ಲಿ ಅನೇಕ ಕಡೆಗಳಲ್ಲಿ ರಸ್ತೆ ಮಧ್ಯದಲ್ಲಿ ನೀರು ತುಂಬಿಕೊಂಡಿತ್ತು. ಕೃತಕ ನೆರೆಯ ಛಾಯೆ ಕಂಡು ಬಂದಿತ್ತು.

Follow us on Social media

About the author