ಚಿಕ್ಕಮಗಳೂರು: ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ ಘಟನೆ ಆಲ್ದೂರು ಬಳಿ ನಡೆದಿದೆ.
ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್ ಕೈ ಕೊಟ್ಟಿದ್ದು, ವಾಹನ ಗದ್ದೆ ಬಳಿ ಹೋಗಿ ಸಿಕ್ಕಿ ಹಾಕಿಕೊಂಡಿದೆ. ಇದರಿಂದ ವಾಹನ ವಾಪಸ್ ತೆಗೆಯಲಾಗದೆ ಪ್ರವಾಸಿಗರು ಕೆಲವು ಕಾಲ ಅಲ್ಲೇ ಪರದಾಡಿದ್ದಾರೆ.
ಪ್ರವಾಸಿಗರ ಪರದಾಟ ನೋಡಿ, ಸ್ಥಳೀಯರು ಟ್ರ್ಯಾಕ್ಟರ್‌ಗೆ ಟಿಟಿಯನ್ನು ಕಟ್ಟಿ, ರಸ್ತೆಯ ಬಳಿ ತಂದು ಬಿಟ್ಟಿದ್ದಾರೆ. ಬಳಿಕ ಸ್ಥಳಿಯರಿಂದ ರಸ್ತೆಯ ಬಗ್ಗೆ ಮಾಹಿತಿ ಪಡೆದು, ಗೂಗಲ್ ಮ್ಯಾಪ್ ಆಫ್ ಮಾಡಿ ಪ್ರವಾಸಿಗರು ಅಲ್ಲಿಂದ ತೆರಳಿದ್ದಾರೆ.
Follow us on Social media