ಬೆಂಗಳೂರು: ಕೋಮು ದ್ವೇಷ ಹರಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್‌ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧದ ಎಫ್ಐಆರ್ ರದ್ದು ಪಡಿಸುವಂತೆ ಕೋರಿ ಶಾಸಕರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಎಸ್. ರಾಚಯ್ಯ ಅವರ ರಜಾಕಾಲದ ಏಕ ಸದಸ್ಯ ಪೀಠ ಈ ಆದೇಶ ಮಾಡಿ, ವಿಚಾರಣೆಯನ್ನು ಜೂ.18ಕ್ಕೆ ಮುಂದೂಡಿತು. ಅರ್ಜಿದಾರರ ವಿರುದ್ಧದ ದಾಖಲಾಗಿರುವ ಇತರ ಮೂರು ಎಫ್ಐಆರ್‌ಗಳಿಗೆ ಹೈಕೋರ್ಟ್ ಈಗಾಗಲೇ ತಡೆಯಾಜ್ಞೆ ನೀಡಿದೆ. ಅದನ್ನು ಪರಿಗಣಿಸಿ ಈ ಪ್ರಕರಣಕ್ಕೂ ತಡೆಯಾಜ್ಞೆ ನೀಡಲಾಗುತ್ತಿದೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
Follow us on Social media