Breaking News

ಬ್ರಿಜೇಶ್ ಚೌಟ ಸೇರಿ ಭಾರತ ಸಂಸದರ ನಿಯೋಗ ಆಗಮಿಸುವ ಹೊತ್ತಲ್ಲೇ ಮಾಸ್ಕೋದಲ್ಲಿ ಡ್ರೋನ್‌ ದಾಳಿ!

ಮಾಸ್ಕೋ: ʻಆಪರೇಷನ್ ಸಿಂಧೂರʼ ಕಾರ್ಯಾಚರಣೆ ಬಳಿಕ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ವಾಸ್ತವಾಂಶ ವಿವರಿಸಲು ಡಿಎಂಕೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ರಷ್ಯಾಕ್ಕೆ ತೆರಳಿತ್ತು. ಭಾರತದ ನಿಯೋಗ ತೆರಳುತ್ತಿದ್ದ ಹೊತ್ತಿನಲ್ಲೇ ಮಾಸ್ಕೋ ವಿಮಾನ ನಿಲ್ದಾಣದ ಮೇಲೆ ಡ್ರೋನ್‌ ದಾಳಿ ನಡೆದಿದೆ.

ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಡ್ರೋನ್‌ ದಾಳಿ ನಡೆದ ಬಳಿಕ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಡಿಎಂಕೆ ನಾಯಕಿ ಕನಿಮೋಳಿ ಅವರ ನೇತೃತ್ವದ ಸರ್ವಪಕ್ಷ ನಿಯೋಗವು ಪ್ರಯಾಣಿಸುತ್ತಿದ್ದ ವಿಮಾನವು ಸಹ ತಡವಾಗಿದ್ದು, ಸಂಸದರ ನಿಯೋಗ ಸುರಕ್ಷಿತವಾಗಿದೆ ಎಂದು ತಿಳಿದುಬಂದಿದೆ.

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಕಳೆದ 3 ವರ್ಷಗಳಿಂದ ನಡೆಯುತ್ತಿದೆ. ಉಭಯ ರಾಷ್ಟ್ರಗಳು ಪದೇ ಪದೇ ಡ್ರೋನ್‌ಗಳನ್ನು ಬಳಸಿ ಪರಸ್ಪರ ದಾಳಿ ಮಾಡುತ್ತಿವೆ. ಆದ್ರೆ ಇಷ್ಟು ದಿನ ಮಾಸ್ಕೋ ಮೇಲೆ ಡ್ರೋನ್ ದಾಳಿಗಳು ಅಪರೂಪವಾಗಿತ್ತು. ಇತ್ತೀಚೆಗೆ ಡ್ರೋನ್ ದಾಳಿಗಳು ಹೆಚ್ಚಾಗಿವೆ. ರಷ್ಯಾದ ರಕ್ಷಣಾ ಸಚಿವಾಲಯವು ಉಕ್ರೇನ್‌ನ 112 ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಇದರಲ್ಲಿ 24 ಡ್ರೋನ್‌ಗಳು ರಾಜಧಾನಿಯ ಕಡೆಗೆ ಬರುತ್ತಿದ್ದವು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

Follow us on Social media

About the author