ಉಡುಪಿ: ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಉಡುಪಿ ಹಾಗೂ ದಕ್ಷಿಣಕನ್ನಡದಲ್ಲಿ ಸೋಮವಾರವೂ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಈ ಹಿನ್ನಲೆ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸೋಮವಾರ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ಬಿರುಸಿನ ಮಳೆ ಸುರಿಯುತ್ತಿರುವುದರಿಂದ ಉಡುಪಿ ನಗರದ ವಿವಿಧಡೆ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರಿಗೆ ತೊಂದರೆ ಉಂಟಾಯಿತು. ದಕ್ಷಿಣಕನ್ನಡ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಈ ಹಿನ್ನಲೆ ಅಂಗನವಾಡಿ ಕೇಂದ್ರಗಳಿಗೆ ಮೇ 26 ರಜೆ ಘೋಷಿಸಲಾಗಿದೆ.
Follow us on Social media